ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿಗೆ ತನ್ನ ವಿವಿಧ ಸ್ನಾತಕೋತ್ತರ (PG) ಅಧ್ಯಯನ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ (Guest Faculty) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೋಧನಾ ವೃತ್ತಿಯಲ್ಲಿ ಆಸಕ್ತಿ ಹೊಂದಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಹುದ್ದೆಗಳ ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ಸಂಕ್ಷಿಪ್ತ ವಿವರ ಇಲ್ಲಿದೆ:

ಶೈಕ್ಷಣಿಕ ಅರ್ಹತೆ

  • ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು (PG) ಪೂರ್ಣಗೊಳಿಸಿರಬೇಕು.
  • ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇ. 55% ಅಂಕಗಳನ್ನು ಪಡೆದಿರಬೇಕು.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50% ಅಂಕ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ: ರೂ. 250
  • SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: ರೂ. 125
  • ಗಮನಿಸಿ: ಒಂದಕ್ಕಿಂತ ಹೆಚ್ಚು ವಿಷಯಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹೆಚ್ಚುವರಿ ಹುದ್ದೆಗೆ ಪ್ರತ್ಯೇಕವಾಗಿ ರೂ. 100 ಪಾವತಿಸಬೇಕು.
  • ಪಾವತಿ ವಿಧಾನ: ಮಂಗಳೂರು ವಿವಿಯ ಅಧಿಕೃತ ವೆಬ್‌ಸೈಟ್‌ (www.mangaloreuniversity.ac.in) ಗೆ ಭೇಟಿ ನೀಡಿ, “Online fees collection” ವಿಭಾಗದಲ್ಲಿ “005/60- Guest Faculty Application fee” ಆಯ್ಕೆ ಮಾಡಿ ಶುಲ್ಕ ಪಾವತಿಸಬೇಕು. ಆನ್‌ಲೈನ್ ಅರ್ಜಿಯೊಂದಿಗೆ ಈ ಇ-ರಶೀದಿಯನ್ನು (E-Receipt) ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

ಪ್ರಮುಖ ದಿನಾಂಕ ಮತ್ತು ಅರ್ಜಿ ಸಲ್ಲಿಕೆ ಲಿಂಕ್

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 1, 2026
  • ಆನ್‌ಲೈನ್ ಅರ್ಜಿ ಸಲ್ಲಿಕೆಯ ಲಿಂಕ್: 14.139.155.115/guest/index.php/home/

ಆಯ್ಕೆ ಪ್ರಕ್ರಿಯೆ ಮತ್ತು ಸಂದರ್ಶನ ಅಭ್ಯರ್ಥಿಗಳನ್ನು ಯುಜಿಸಿ (UGC) ಮಾನದಂಡಗಳು ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳನ್ವಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದ ನಿಖರ ದಿನಾಂಕವನ್ನು ಮುಂಬರುವ ದಿನಗಳಲ್ಲಿ ವಿವಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ಸಂದರ್ಶನಕ್ಕೆ ಹಾಜರುಪಡಿಸಬೇಕಾದ ದಾಖಲೆಗಳು:

  • ಎಸ್‌ಎಸ್‌ಎಲ್‌ಸಿ (SSLC) ಅಂಕಪಟ್ಟಿ
  • ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು ಹಾಗೂ ಪ್ರಮಾಣ ಪತ್ರಗಳು
  • SCOPUS/WOS/UGC-CARELIST ನಲ್ಲಿ ಪ್ರಕಟವಾದ ಸಂಶೋಧನಾ ಪತ್ರಿಕೆಗಳ ಮೂಲ ದಾಖಲೆಗಳು
  • (ಮೇಲಿನ ಎಲ್ಲಾ ದಾಖಲೆಗಳ ಮೂಲ ಮತ್ತು ಸ್ವಯಂ ದೃಢೀಕರಿಸಿದ ನಕಲು ಪ್ರತಿಗಳನ್ನು ತರುವುದು ಕಡ್ಡಾಯ).

ಲಭ್ಯವಿರುವ ಪ್ರಮುಖ ವಿಭಾಗಗಳು ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಗಣಕ ವಿಜ್ಞಾನ (MCA), ಎಂಬಿಎ (MBA), ವಾಣಿಜ್ಯ, ಸಮಾಜಶಾಸ್ತ್ರ, ಲೈಬ್ರರಿ ಸೈನ್ಸ್, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ ಸೇರಿದಂತೆ ಒಟ್ಟು 30ಕ್ಕೂ ಹೆಚ್ಚು ಸ್ನಾತಕೋತ್ತರ ವಿಭಾಗಗಳಲ್ಲಿ ಈ ಹುದ್ದೆಗಳು ಲಭ್ಯವಿವೆ.

Leave a Reply

Your email address will not be published. Required fields are marked *